AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರಾವಳಿಗೆ ವರುಣಾಘಾತ, 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Karnataka Weather Tomorrow: ಕರಾವಳಿ ಭಾಗದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 3 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದ 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಕರಾವಳಿಗೆ ವರುಣಾಘಾತ, 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​
ಮಳೆ
ಪ್ರಸನ್ನ ಹೆಗಡೆ
|

Updated on: Oct 23, 2025 | 6:42 PM

Share

ಬೆಂಗಳೂರು, ಅಕ್ಟೋಬರ್​ 23: ರಾಜ್ಯದಲ್ಲಿ ಇನ್ನೂ ಕೆಲವುದಿನಗಳ ಕಾಲ ಮಳೆ (Weather Forecast) ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ. ಕಳೆದ ಎರಡು ಮೂರು ದಿನಗಳಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು,ಇದು ಇನ್ನೂ ಕೆಲ ದಿನ ಮುಂದುವರಿಯುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ನಾಳೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದ್ದು, ಪ್ರವಾಹ ಮತ್ತು ಗುಡ್ಡ ಪ್ರದೇಶದಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಮ ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆಮ ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಬಳ್ಳಾರಿಯಲ್ಲಿ ಭಾರಿ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾವೇರಿಯ ಕೆಲವೆಡೆ ಪ್ರವಾಹ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಬೆಂಗಳೂರು ನಗರದಲ್ಲೂ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ವರುಣ ಆರ್ಭಟಿಸಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 5ರಿಂದ ರಾತ್ರಿ 8ಗಂಟೆ ನಡುವೆ ಮಳೆಯನ್ನು ನಿರೀಕ್ಷಿಸಲಾಗಿದೆ. ಬೆಳಗ್ಗೆ ಮತ್ತು ಮಧ್ಯಾಹ್ನ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 14-24 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 26.5 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು