AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆ

Karnataka Weather Tomorrow: ಕರಾವಳಿ ಜಿಲ್ಲೆಗಳಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣ ಮಳೆ ಸುರಿಯಲಿದೆ. ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಸಂಜೆ ಬಳಿಕ ಮಳೆ ಆಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಭಾಶಶಃ ಮೋಡ ಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆ
ಮಳೆ Image Credit source: PTI
ಪ್ರಸನ್ನ ಹೆಗಡೆ
|

Updated on:Oct 07, 2025 | 6:59 PM

Share

ಬೆಂಗಳೂರು, ಅಕ್ಟೋಬರ್​ 07: ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ (Rain) ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ರೆಡ್​ ಅಲರ್ಟ್​ ಹಿನ್ನಲೆ ಗಡಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಶಶಃ ಮೋಡ ಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿ ವೇಗ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇರುವ ಕಾರಣ ಕೆಲವು ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯನ್ನೂ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆ ಆಗಲಿದ್ದು, ಹೆಚ್ಚು ಗಾಳಿ ಇರಲಿದೆ. ಬೀದರ್​, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಆಗಲಿದೆ. ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಶೇ. 25ರಷ್ಟು ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಯುಪಿಐ ಅಪ್​ಡೇಟ್; ಪೇಮೆಂಟ್​ಗೆ ಪಿನ್ ನೀಡಬೇಕಿಲ್ಲ; ಬಳಕೆದಾರರಿಗೆ ಹೆಚ್ಚಿನ ಆಯ್ಕೆ

ಬೆಂಗಳೂರಲ್ಲೂ ಮಳೆ

ರಾಜಧಾನಿ ಬೆಂಗಳೂರಲ್ಲಿಯೂ ನಾಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲಿ ಸಾಮಾನ್ಯ ಮಳೆ ಆಗಲಿದ್ದು, ಸಂಜೆ ವೇಳೆ ಗಾಳಿ ಸಹಿತ ಮಳೆ ಸುರಿಯಲಿದೆ. ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:57 pm, Tue, 7 October 25

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ