AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಅಬ್ಬರ, ಕರಾವಳಿಯಲ್ಲಿ ಹೈ ಅಲರ್ಟ್​

Karnataka Weather Tomorrow: ನೆರೆ ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಮೊಂತಾ ಚಂಡಮಾರುತದಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗಲಿದೆ. ಕರಾವಳಿ ಭಾಗದಲ್ಲಿ ತೀವ್ರ ಗಾಳಿ ಬೀಸಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಣ್ಣ ಮಳೆಯ ನಿರೀಕ್ಷೆಯಿದೆ. ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದ್ದು, ಕರ್ನಾಟಕದ ಉತ್ತರ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಅಬ್ಬರ, ಕರಾವಳಿಯಲ್ಲಿ ಹೈ ಅಲರ್ಟ್​
ಮಳೆ
ಪ್ರಸನ್ನ ಹೆಗಡೆ
|

Updated on:Oct 29, 2025 | 7:03 PM

Share

ಬೆಂಗಳೂರು, ಅಕ್ಟೋಬರ್​ 29: ನೆರೆ ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳ ಮೇಲೆ ಉಂಟಾಗಲಿದೆ. ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಾಳೆ ಕಡಿಮೆಯಾಗಲಿದ್ದು, ಕರಾವಳಿ ಭಾಗದಲ್ಲಿ ಗಾಳಿಯ ಪ್ರಮಾಣ ಹೆಚ್ಚಿರಲಿದೆ. ತೆಲಂಗಾಣ, ಅಂಧ್ರ ಮತ್ತು ತಮಿಳುನಾಡಿನ ಗಡಿ ಜಿಲ್ಲೆಗಳಲ್ಲಿ ವಾತಾವರಣ ಏರಿಳಿತವಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಅಥವಾ ಸಾಮಾನ್ಯ ಮಳೆ ಸುರಿಯುವ ಸಂಭವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

8ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಜೊತೆಗೆ ಬಾರಿ ಗಾಳಿ ಇರಲಿದೆ. ಗಾಳಿಯ ವೇಗ ಗಂಟೆಗೆ 45-55 ಕಿ.ಮೀ. ಇರಲಿದ್ದು 60 ಕಿ.ಮೀ. ತಲುಪುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದ ಉತ್ತರ ಭಾಗದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಬೀದರ್​ನಲ್ಲಿ ದಟ್ಟ ಮೋಡ ಅಥವಾ ಸಣ್ಣ ಪ್ರಮಾಣದ ಮಳೆಯಾಗಲಿದೆ. ಕಲಬುರಗಿ, ಚಿತ್ರದುರ್ಗ, ದಾರವಾಡ ಮತ್ತು ಬೆಳಗಾವಿಯಲ್ಲೂಇ ಮೋಡ ಕವಿದ ವಾತಾವರಣ ಇರಲಿದೆ.

ಇದನ್ನೂ ಓದಿ: ಚಂಡಮಾರುತದ ಅಬ್ಬರ; ಆಂಧ್ರಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿ, ಕರಾವಳಿ ಜಿಲ್ಲೆಗಳಲ್ಲಿ ವಾಹನ ಸಂಚಾರ ನಿಷೇಧ

ಆಂಧ್ರದ ಕಾಕಿನಾಡ ತೀರಕ್ಕೆ ಮೊಂಚಾ ಚಂಡಮಾರುತ ಅಪ್ಪಳಿಸಿದ ಪರಿಣಾಮ ಆಂಧ್ರ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಹೈಅಲರ್ಟ್ ಘೊಷಿಸಲಾಗಿದೆ. ಆಂಧ್ರ, ತಮಿಳುನಾಡು,ಪುದುಚೇರಿ, ಪಶ್ಚಿಮಬಂಗಾಳ, ಒಡಿಶಾದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಚಂಡಮಾರುತದಿಂದ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ​ ನಿಯೋಜನೆ ಮಾಡಲಾಗಿದೆ. ಸಮುದ್ರ ತೀರದ ಹಲವು ಗ್ರಾಮಗಳ ಜನರನ್ನು ರಕ್ಷಣಾ ಪಡೆ ಸ್ಥಳಾಂತರಿಸಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಸೂಚಿಸಲಾಗಿದ್ದು, ಮೀನುಗಾರಿಕೆಗೂ ನಿಷೇಧ ಹೇರಲಾಗಿದೆ.

ಒಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:56 pm, Wed, 29 October 25