AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ

Karnataka Weather Tomorrow: ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುವ ನಿರೀಕ್ಷೆ ಇದ್ದು, ನಾಳೆ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲೂ ವರುಣ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ
ಮಳೆ
ಪ್ರಸನ್ನ ಹೆಗಡೆ
|

Updated on: Oct 21, 2025 | 5:21 PM

Share

ಬೆಂಗಳೂರು, ಅಕ್ಟೋಬರ್​ 21: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ (Weather Forecast) ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆ ಯೆಲ್ಲೋ ಅಲರ್ಟ್​ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಎಚ್ಚರ ಎಚ್ಚರ…ಕರ್ನಾಟಕದಲ್ಲಿ ಭಾರಿ ಎಚ್ಚರಿಕೆ: ಎಲ್ಲಿಯವರೆಗೆ ಗೊತ್ತಾ..?

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ