ನಾಳೆಯ ಹವಾಮಾನ: ರಾಜ್ಯದ 3 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, ಬೆಂಗಳೂರಲ್ಲೂ ಮಳೆ

Karnataka Weather Tomorrow: ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಹಲವೆಡೆ ನಾಳೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ 3 ಜಿಲ್ಲೆಗಳಲ್ಲಿ ಆರೆಂಜ್​ ಮತ್ತು 21 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಲ್ಲೂ ನಾಳೆ ವರುಣ ಅಬ್ಬರಿಸಲಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ರಾಜ್ಯದ 3 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, ಬೆಂಗಳೂರಲ್ಲೂ ಮಳೆ
ಮಳೆ

Updated on: Oct 10, 2025 | 5:28 PM

ಬೆಂಗಳೂರು, ಅಕ್ಟೋಬರ್​ 10: ರಾಜ್ಯದಲ್ಲಿ ನಾಳೆಯೂ ವರುಣನ (Rain) ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಾಳೆ ಎಲ್ಲೆಲ್ಲಿ ಮಳೆ?

ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ​ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್​, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ.

ಇದನ್ನೂ ಓದಿ: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್​, ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಬೆಂಗಳೂರಲ್ಲೂ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಲ್ಲೂ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಶೇಕಡಾ 91ರಷ್ಟು ಮಳೆಯಾಗುವ ಸಾಧ್ಯತೆ ಅಂದಾಜಿಸಲಾಗಿದ್ದು, ಗುಡುಗು ಸಹಿತ ವರುಣನ ಆಗಮನವಾಗಲಿದೆ. ನಗರದ ಗರಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಗಾಳಿಯ ವೇಗ ಗಂಟೆಗೆ 14 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.