ನಾಳೆಯ ಹವಾಮಾನ: ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್, ಕರಾವಳಿಯಲ್ಲೂ ಮಳೆ
Karnataka Weather Tomorrow: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಾಳೆ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು,ರಾಜಧಾನಿ ಬೆಂಗಳೂರಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಅಕ್ಟೋಬರ್ 09: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯೂ ವರುಣಾರ್ಭಟ (Rain) ಮುಂದುವರಿಯಲಿದೆ. ಕರಾವಳಿ ಮತ್ತು ಘಟ್ಟ ಪ್ರದೇಶ ಭಾಗಗಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗಾಳಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 35–45 ಕಿ.ಮೀ.ನಷ್ಟು ಇರಲಿದ್ದು, ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಳ ಹವೆ ಇರಲಿದೆ.
ಇದನ್ನೂ ಓದಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ
ಹೇಗಿರಲಿದೆ ಬೆಂಗಳೂರು ವಾತಾವರಣ?
ಬೆಂಗಳೂರಲ್ಲಿ ನಾಳೆ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಶೇಕಡಾ 80-100ರಷ್ಟು ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, 23-26 ಮಿ.ಮೀ.ನಷ್ಟು ಮಳೆಯನ್ನು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 30–40 ಕಿ.ಮೀ.ನಷ್ಟು ಇರಲಿದ್ದು, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




