AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರಾವಳಿಯಲ್ಲಿ ವರುಣಾರ್ಭಟ, ರಾಜ್ಯದ ಎಲ್ಲೆಲ್ಲಿ ಮಳೆ?

Karnataka Weather Tomorrow: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದೆ. ಉತ್ತರ ಕನ್ನಡ ಭಾಗದಲ್ಲಿ ಗಾಳಿ ಸಹಿತ ಮಳೆಯಾಗಲಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರಲ್ಲಿಯೂ ಸಣ್ಣ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಕರಾವಳಿಯಲ್ಲಿ ವರುಣಾರ್ಭಟ, ರಾಜ್ಯದ ಎಲ್ಲೆಲ್ಲಿ ಮಳೆ?
ಮಳೆ
ಪ್ರಸನ್ನ ಹೆಗಡೆ
|

Updated on: Oct 19, 2025 | 5:12 PM

Share

ಬೆಂಗಳೂರು, ಅಕ್ಟೋಬರ್​ 19: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದ್ದು, 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್​ (Weather Forecast) ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೇಗಿರಲಿದೆ ರಾಜ್ಯದ ಹವಾಮಾನ?

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಳ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ ಮತ್ತು ಉಡುಪಿ ತಾಲೂಕಿನಲ್ಲಿ ವರುಣ ಅಬ್ಬರಿಸಲಿದ್ದಾನೆ. ಉತ್ತರ ಕನ್ನಡ ಭಾಗದಲ್ಲಿ ಗಾಳಿ ಸಹಿತ ಮಳೆಯಾಗಲಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರ ಇಳಿಯದಂತೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿ ಕಂಡುಬರಲಿದೆ. ಬೆಳಗಾವಿ, ಬೀದರ್​, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಕಂಡುಬರಲಿದೆ.

ಇದನ್ನೂ ಓದಿ: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ನಗರದಲ್ಲಿಯೂ ನಾಳೆ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಶೇಕಡಾ 78ರಿಂದ 100ರಷ್ಟು ಮಳೆಯ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡುಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್​ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು