AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣಾರ್ಭಟ ಮುಂದುವರಿಯಲಿದ್ದು, 24 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಳೆಯ ಹವಾಮಾನ: 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ
ಮಳೆ
ಪ್ರಸನ್ನ ಹೆಗಡೆ
|

Updated on: Oct 16, 2025 | 4:43 PM

Share

ಬೆಂಗಳೂರು, ಅಕ್ಟೋಬರ್​ 16: ಕಲ್ಯಾಣ ಕರ್ನಾಟಕ ಭಾಗ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ ನಾಳೆ ಮಳೆಯಾಗಲಿದ್ದು, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Weather Forecast)​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗಲಿದ್ದು, ಹಳೇ ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದ್ದು, ಬೆಂಗಳೂರಲ್ಲೂ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಗಾಳಿ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್​ 17ರಿಂದ 19ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಭಾಗದಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಇದನ್ನೂ ಓದಿ: ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 20-21 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್