AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಪ್ರಮಾಣ ಇಳಿಕೆ

Karnataka Weather Tomorrow: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ನಾಳೆ ವರುಣಾರ್ಭಟ ಮುಂದುವರಿಯಲಿದೆ. 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕರಾವಳಿ ಭಾಗದಲ್ಲಿಯೂ ಮಳೆ ಕಡಿಯಾಗುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ನಾಳೆಯ ಹವಾಮಾನ: 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಪ್ರಮಾಣ ಇಳಿಕೆ
ಮಳೆ
ಪ್ರಸನ್ನ ಹೆಗಡೆ
|

Updated on: Oct 12, 2025 | 3:14 PM

Share

ಬೆಂಗಳೂರು, ಅಕ್ಟೋಬರ್​ 12: ಬಹುತೇಕ ಜಿಲ್ಲೆಗಳಿಗೆ ನಾಳೆ ವರುಣ (Rain) ಬಿಡುವು ನೀಡಲಿದ್ದು, ರಾಜ್ಯದ 4 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಳೇ ಮೈಸೂರು ಭಾಗದಲ್ಲಿ ವರುಣನ ಆರ್ಭಟ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲೂ ಕಡಿಮೆ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಲ್ಲಿಯೂ ನಾಳೆ ಗುಡುಗು ಸಹಿತ ಸಣ್ಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ನಾಳೆ ಮಳೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇದೆ.

ಇದನ್ನೂ ಓದಿ: ಇನ್ನೆರಡು ದಿನ ಕರ್ನಾಟಕದಲ್ಲಿ ವರುಣನ ಅಬ್ಬರ; ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಜನ ತತ್ತರ

ಹೇಗಿರಲಿದೆ ಬೆಂಗಳೂರು ಹವಾಮಾನ?

ಸೋಮವಾರ (ಅ.13) ಬೆಂಗಳೂರಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಶೆ. 70ರಿಂದ 100ರಷ್ಟು ಮಳೆಯ ನಿರೀಕ್ಷೆ ಇದ್ದು, ಸುಮಾರು 1.8 ಮಿ.ಮೀ. ಯಿಂದ 14.7 ಮಿ.ಮೀ ಮಳೆಯಾಗಬಹುದು. ಗಾಳಿಯ ವೇಗ ಗಂಟೆಗೆ 10-13 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ