
ಬೆಂಗಳೂರು, ಅಕ್ಟೋಬರ್ 12: ಬಹುತೇಕ ಜಿಲ್ಲೆಗಳಿಗೆ ನಾಳೆ ವರುಣ (Rain) ಬಿಡುವು ನೀಡಲಿದ್ದು, ರಾಜ್ಯದ 4 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಳೇ ಮೈಸೂರು ಭಾಗದಲ್ಲಿ ವರುಣನ ಆರ್ಭಟ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲೂ ಕಡಿಮೆ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಲ್ಲಿಯೂ ನಾಳೆ ಗುಡುಗು ಸಹಿತ ಸಣ್ಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ನಾಳೆ ಮಳೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇದೆ.
ಇದನ್ನೂ ಓದಿ: ಇನ್ನೆರಡು ದಿನ ಕರ್ನಾಟಕದಲ್ಲಿ ವರುಣನ ಅಬ್ಬರ; ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಜನ ತತ್ತರ
ಸೋಮವಾರ (ಅ.13) ಬೆಂಗಳೂರಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಶೆ. 70ರಿಂದ 100ರಷ್ಟು ಮಳೆಯ ನಿರೀಕ್ಷೆ ಇದ್ದು, ಸುಮಾರು 1.8 ಮಿ.ಮೀ. ಯಿಂದ 14.7 ಮಿ.ಮೀ ಮಳೆಯಾಗಬಹುದು. ಗಾಳಿಯ ವೇಗ ಗಂಟೆಗೆ 10-13 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.