ನಾಳೆಯ ಹವಾಮಾನ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ಹೆಚ್ಚು ಮಳೆ

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದ ಕೆಲವು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ನಾಳೆಯ ಹವಾಮಾನ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ಹೆಚ್ಚು ಮಳೆ
ಮಳೆ

Updated on: Oct 17, 2025 | 5:29 PM

ಬೆಂಗಳೂರು, ಅಕ್ಟೋಬರ್​ 17: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವರುಣನ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ (Weather Forecast) ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶದ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ನಾಳೆ ಮಳೆ?

ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಿರುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಮುಂದಿನ 5 ದಿನ ಹೇಗಿರಲಿದೆ  ವಾತಾವಣರ?

ರಾಜಧಾನಿ ಬೆಂಗಳೂರಲ್ಲಿಯೂ ನಾಳೆ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಶೇಕಡಾ 69ರಿಂದ 100ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 12-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು​, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Fri, 17 October 25