Karnataka Weather Forecast: ಕರ್ನಾಟಕದಲ್ಲಿ ಮಳೆ ಚುರುಕು, 7 ದಿನ ಅಬ್ಬರಿಸಲಿರುವ ವರುಣ

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಸಹ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

Karnataka Weather Forecast: ಕರ್ನಾಟಕದಲ್ಲಿ ಮಳೆ ಚುರುಕು, 7 ದಿನ ಅಬ್ಬರಿಸಲಿರುವ ವರುಣ
Karnataka Weather Forecast

Updated on: Jul 18, 2026 | 5:16 PM

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮಳೆ ಮತ್ತೆ ಚುರುಕು
  • ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆ
  • ಮುಂದಿನ ಏಳು ದಿನ ಕರ್ನಾಟಕದಲ್ಲಿ ಮಳೆ ಎಂದು ಮುನ್ಸೂಚನೆ ನೀಡಿದ ಭಾರತೀಯ ಹವಾಮಾನ ಇಲಾಖೆ

ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಿ (Karnataka) ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮಳೆ (Rain) ಮತ್ತೆ ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಪ್ರಮುಖ ಪ್ರಾದೇಶಿಕ ಹವಾಮಾನ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ನಿರಂತರವಾಗಿ ಗಾಳಿಯ ವೇಗ (30-40 ಕಿ.ಮೀ.) ಹೆಚ್ಚಿರಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು


ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.


ಇನ್ನು ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 27°C ರಿಂದ 29°C ಹಾಗೂ ಕನಿಷ್ಠ ತಾಪಮಾನ 21°C ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sat, 18 July 26

Follow Us