Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆ
ಕರ್ನಾಟಕದ ಬಹುತೇಕ ಕಡೆ ಬಿಸಿಲಿನ ಝಳ ಹೆಚ್ಚಾಗಿದೆ, ಮಾರ್ಚ್ 31ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: India Weather: ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ