Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್​ 31ರಿಂದ ಮಳೆ

ಕರ್ನಾಟಕದ ಬಹುತೇಕ ಕಡೆ ಬಿಸಿಲಿನ ಝಳ ಹೆಚ್ಚಾಗಿದೆ, ಮಾರ್ಚ್​ 31ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್​ 31ರಿಂದ ಮಳೆ
ಮಳೆ
Image Credit source: Mint

Updated on: Mar 27, 2024 | 7:26 AM

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್​ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us