ನಾಳೆಯ ಹವಾಮಾನ: ಕರಾವಳಿಯಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

Karnataka Weather Tomorrow: ಡಿಸೆಂಬರ್ 5ರಿಂದ ರಾಜ್ಯದಲ್ಲಿ 4 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಕಳೆದ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಬ್ರೇಕ್ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕರಾವಳಿ ಮತ್ತು ಕೆಲವು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನ ವಾತಾವರಣ ಹೇಗಿರಲಿದೆ ಎಂಬ ಬಗ್ಗೆಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ
ಒಣ ಹವೆ

Updated on: Dec 05, 2025 | 5:42 PM

ಬೆಂಗಳೂರು, ಡಿಸೆಂಬರ್​​ 05: ನಾಳೆಯಿಂದ 4 ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಸೇರಿ ಹಲವೆಡೆ ಕಳೆದ ದಿನಗಳಿಂದ ಸುರಿಯುತ್ತಿದ್ದ ಸಾಧಾರಣ ಮಳೆಗೆ ಬ್ರೇಕ್​​ ಬೀಳಲಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ನಾಳೆ ಮೋಡಕವಿದ ವಾತಾವರಣ ಇರುವ ಸಾಧ್ಯತೆ ಇದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?


ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮತ್ತು ಶಿವಮೊಗ್ಗದಲ್ಲಿಯೂ ಸಾಮಾನ್ಯವಾಗಿ ಇದೇ ರೀತಿಯ ವಾತಾವರಣ ಇರುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ.

ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ಬೆಂಗಳೂರಲ್ಲಿ ನಾಳೆ ಮೋಡದ ವಾತಾವರಣ

ಬೆಂಗಳೂರಲ್ಲಿ ಇಂದು ಬೆಳಿಗ್ಗೆ ವೇಳೆ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ತಂಪಾದ ಗಾಳಿಯ ಜೊತೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಕೂಡ ಆದ ಪರಿಣಾಮ ಸಿಲಿಕಾನ್​​ ಸಿಟಿ ಫುಲ್​​ ಕೂಲ್​​ ಕೂಲ್​​ ಆಗಿತ್ತು. ನಾಳೆ ಮುಂಜಾನೆ ಕೂಡ ಮಂಜು ನಗರದ ಹಲವೆಡೆ ಕಾಣಸಿಗಲಿದ್ದು, ಬಳಿಕ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್​​ ಇರಲಿದೆ. ಗಾಳಿಯ ವೇಗ ಗಂಟೆಗೆ 8-14 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:41 pm, Fri, 5 December 25

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us