AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳವರೆಗೆ ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ತಾಪಮಾನದಲ್ಲಿ ಯಾವುದೇ ಗಣನೀಯ ಬದಲಾವಣೆ ಆಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ
ಮಳೆ
ವಿವೇಕ ಬಿರಾದಾರ
|

Updated on: Apr 12, 2025 | 5:52 PM

Share

ಬೆಂಗಳೂರು, ಏಪ್ರಿಲ್​ 12: ಬೇಸಿಗೆಗಾಲದಲ್ಲಿ (Summer) ಮಳೆರಾಯನ (Rain) ಆರ್ಭಟ ಜೋರಾಗಿಯೇ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದೆ. ಶುಕ್ರವಾರ (ಏ.11) ಸಂಜೆ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ ಮಳೆಯಾಗಿತ್ತು. ಈ ಮಳೆ ಇಂದೂ (ಏ.12) ಕೂಡ ಮುಂದುವರೆಯಲಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೇ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಕೊಪ್ಪಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

3 ದಿನಗಳ ಮಳೆ ಭವಿಷ್ಯ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಹಾಗೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದೆ.

ಇದನ್ನೂ ನೋಡಿ: ಚಿಕ್ಕಮಗಳೂರು ಮಳೆ ಅವಾಂತರ: ಪ್ರಪಾತಕ್ಕೆ ಉರುಳಿದ ಕೆಎಸ್​ಆರ್​ಟಿಸಿ ಬಸ್

ತಾಪಮಾನ ಭವಿಷ್ಯ

ಏಪ್ರಿಲ್​ 11 ರಂದು ದಾವಣಗರೆ ಗ್ರಾಮಾಂತರ ಮತ್ತು ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 42.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಇನ್ನು ರಾಯಚೂರು ಜಿಲ್ಲೆಯ 17 ಪ್ರದೇಶಗಳಲ್ಲಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಒಂದು ಪ್ರದೇಶದಲ್ಲಿ, ಯಾದಗಿರಿ ಜಿಲ್ಲೆಯ 8 ಸ್ಥಳಗಳಲ್ಲಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು 40 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಇನ್ನು, ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ