AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ನಾಳೆ 4 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ತಿಂಗಳಾಂತ್ಯದವರೆಗೂ ಮಳೆ ಮುನ್ಸೂಚನೆ

Monsoon 2026: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೂ ಭಾರಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ,, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather Forecast: ನಾಳೆ 4 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ತಿಂಗಳಾಂತ್ಯದವರೆಗೂ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on:Jul 27, 2026 | 6:43 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ತಿಂಗಳಾಂತ್ಯದವರೆಗೂ ಮಳೆ ಮುನ್ಸೂಚನೆ
  • ನಾಳೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​
  • ಯಾವ್ಯಾವ ಜಿಲ್ಲೆಗಳಲ್ಲಿ ವರ್ಷಧಾರೆಯ ಮುನ್ಸೂಚನೆ?

ಬೆಂಗಳೂರು, ಜುಲೈ 27: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಮಾಹಿತಿಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೂ ಉತ್ತಮ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜುಲೈ 30ರ ವರೆಗೂ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದ್ದರೆ, ದಕ್ಷಿಣ ಒಳನಾಡಿಗೆ ಜುಲೈ 28ರಂದು ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡು ಭಾಗದ ಕೆಲವೆಡೆಯೂ ಇನ್ನೂ ಕೆಲ ದಿನಗಳು ವರ್ಷಧಾರೆಯ ಮುನ್ಸೂಚನೆ ಇರೋದಾಗಿ ಹವಾಮಾನ ಇಲಾಖೆ ತಿಳಿಸಿದೆ.

ನಾಲ್ಕು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​

ಜುಲೈ 28 ಅಂದರೆ ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಗಾಳಿಯ ಜೊತಗೆ ಮಳೆಯನ್ನು ಅಂದಾಜಿಸಲಾಗಿದೆ. ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಮಳೆ ಸುರಿಯಲಿದ್ದು, ಬೀದರ್​​, ಗದಗ, ಹಾವೇರಿ. ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲೂ ಮಳೆಯ ಕೊರತೆ; ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 80ಕ್ಕಿಂತ ಇಳಿಕೆ

ಚುಂಚನಕುಪ್ಪೆಯಲ್ಲಿ ದಾಖಲೆಯ ಮಳೆ

ಕಳೆದ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ,, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ, ಶಿವಮೊಗ್ಗದ ತೀರ್ಥಹಳ್ಳಿಯ ಆಗುಂಬೆ 1ರಲ್ಲಿ 66.4 ಮಿ.ಮೀ, ದಕ್ಷಿಣ ಕನ್ನಡದ ಬೆಳ್ತಂಗಡಿಯ ನೆರಿಯದಲ್ಲಿ 65 ಮಿ.ಮೀ,, ವಿಜಯನಗರದ ಹರಪ್ಪನಹಳ್ಳಿಯ ಪುಣಭಘಟ್ಟದಲ್ಲಿ 58 ಮಿ.ಮೀ,, ಕೊಡಗಿನ ವಿರಾಜಪೇಟೆಯ ಬಿರುನಾನಿಯಲ್ಲಿ 48ಮಿ.ಮೀ, ಮತ್ತು ಶೃಂಗೇರಿಯ ಬೇಗಾರಿನಲ್ಲಿ 47 ಮಿ.ಮೀ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:38 pm, Mon, 27 July 26

Follow Us