AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕಾದ ಭೂಮಿ ಸ್ವಲ್ಪ ತಂಪಾಗಿದೆ. ಆದರೂ ವಾತಾವರಣ ಅಷ್ಟು ತಂಪಾಗಿಲ್ಲ. ಏಪ್ರಿಲ್ 3ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಮಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on:Mar 28, 2025 | 7:22 AM

Share

ಬೆಂಗಳೂರು, ಮಾರ್ಚ್​ 28: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.

ಬೈಲಹೊಂಗಲ, ಖಾನಾಪುರ, ಸಂಕೇಶ್ವರ, ಬೆಳಗಾವಿ, ಹುಂಚದಕಟ್ಟೆ, ನಾಪೋಕ್ಲು. ಭಾಗಮಂಡಲ, ಸೋಮವಾರಪೇಟೆ, ಹಾರಂಗಿ, ಶೃಂಗೇರಿ, ಬಾಳೆಹೊನ್ನೂರು, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ. ಕಾರವಾರ, ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಬೀದರ್​ನಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.3 ಡಿಗ್ರಿ

ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Fri, 28 March 25

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?