AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಹವಾಮಾನ: ಉತ್ತರ ಒಳನಾಡಿನ ಹಲವೆಡೆ ಮಳೆ, ಹೇಗಿರಲಿದೆ ಬೆಂಗಳೂರು ವಾತಾವರಣ?

Karnataka Weather Today: ರಾಜ್ಯದಲ್ಲಿ ಇಂದು (ನವೆಂಬರ್ 20) ಚಳಿ ಹಾಗೂ ಒಣ ಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದು, ಬಳ್ಳಾರಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೆಳಗ್ಗಿನ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ತುತುಂತುರು ಮಳೆ ನಿರೀಕ್ಷಿಸಲಾಗಿದೆ.

ಇಂದಿನ ಹವಾಮಾನ: ಉತ್ತರ ಒಳನಾಡಿನ ಹಲವೆಡೆ ಮಳೆ, ಹೇಗಿರಲಿದೆ ಬೆಂಗಳೂರು ವಾತಾವರಣ?
ಮಳೆ
ಪ್ರಸನ್ನ ಹೆಗಡೆ
|

Updated on: Nov 20, 2025 | 7:25 AM

Share

ಬೆಂಗಳೂರು, ನವೆಂಬರ್​ 20: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಮುಂದುವರಿದಿದ್ದು, ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಣ್ಣಪ್ರಮಾಣದ ಮಳೆಯಾಗುವ ಸಾಧ್ಯತೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ. ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಕಲಬುರಗಿ ಭಾಗದಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿಯೂ ಸಾಧಾರಣ ಮಳೆಯ ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ಬೆಳಗ್ಗಿನ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ. ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೀದರ್​​ನಲ್ಲಿ ಇತ್ತೀಚೆಗೆ ರಾಜ್ಯದಲ್ಲೇ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್​ ದಾಖಲಾಗಿತ್ತು.

ಇದನ್ನೂ ಓದಿ:  ಚಳಿ ಅಂತ ರೂಮ್​​ನಲ್ಲಿ ಬೆಂಕಿ ಹಾಕಿಕೊಂಡು ನಿದ್ರೆಗೆ ಜಾರಿದ ಯುವಕರು, ಉಸಿರುಗಟ್ಟಿ ಮೂವರು ಸಾವು

ಚಳಿಯ ಪ್ರಮಾಣ ಏರಿಕೆ

ಕೆಲವು ಪ್ರದೇಶಗಳಲ್ಲಿ ಹೆಚ್ಚು ಚಳಿ ಇರುವುದು ಗಮನಕ್ಕೆ ಬಂದಿದ್ದು, ಕರಾವಳಿ ಪ್ರದೇಶಗಳು ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ಗಳಷ್ಟು ತಾಪಮಾನ ಏರಿಳಿಕೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಯಾವುದೇ ಮಹತ್ತರ ಬದಲಾವಣೆ ಕಂಡುಬಂದಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರ (KSNDMC) ನೀಡಿದ ಮಾಹಿತಿಯ ಪ್ರಕಾರ, ನವೆಂಬರ್ 1ರಿಂದ ನವೆಂಬರ್ 17ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಒಟ್ಟು 26 ಜಿಲ್ಲೆಗಳು ಭಾರಿ ಕೊರತೆ ದಾಖಲಿಸಿದ್ದರೆ, ಇನ್ನೂ ಮೂರು ಜಿಲ್ಲೆಗಳು ಕೊರತೆ ದಾಖಲಿಸಿವೆ. ಕೇವಲ ಎರಡು ಜಿಲ್ಲೆಗಳಲ್ಲಿ ನಿರೀಕ್ಷೆ ಮೀರಿ ಮಳೆಯಾಗಿವೆ. ಕಲಬುರಗಿಯಲ್ಲಿ ಅತಿರಿಕ್ತವಾಗಿ ಮಳೆ ಸುರಿದರೆ, ಯಾದಗಿರಿಯಲ್ಲಿಯೂ ಭಾರಿ ಮಳೆಯಾಗಿದೆ ಎಂದು ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ