AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಮುಂದಿನ 5 ದಿನಗಳ ಕಾಲ ವರುಣನ ಅಬ್ಬರ, ಎಲ್ಲೆಲ್ಲಿ ಮಳೆ?

Karnataka Weather Tomorrow: ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ನಾಳೆ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ, ಆದರೆ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿಯೂ ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಕರ್ನಾಟಕ ಹವಾಮಾನ: ಮುಂದಿನ 5 ದಿನಗಳ ಕಾಲ ವರುಣನ ಅಬ್ಬರ, ಎಲ್ಲೆಲ್ಲಿ ಮಳೆ?
ಮಳೆ
ಪ್ರಸನ್ನ ಹೆಗಡೆ
|

Updated on: Dec 02, 2025 | 5:28 PM

Share

ಬೆಂಗಳೂರು, ನವೆಂಬರ್​​ 02: ರಾಜ್ಯದಲ್ಲಿ ಚಳಿಯ ನಡುವೆ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ನಾಳೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಪ್ರದೇಶಗಳಲ್ಲಿ ಮಳೆ?

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣ ಹವೆಯ ವಾತಾವರಣವನ್ನು ಅಂದಾಜಿಸಲಾಗಿದೆ.  ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಕಂಡುಬರಲಿದೆ.

ಇದನ್ನೂ ಓದಿ: ರಾಜ್ಯದ ಕೆಲವೆಡೆ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಬೆಂಗಳೂರು ನಗರದಲ್ಲಿಯೂ ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ನಗರದ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್​​​ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6-13 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ