Karnataka Weather: ಕರ್ನಾಟಕದ ಈ ಕೆಳಗಿನ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ; ದೇಶಕ್ಕೆಲ್ಲಾ ವ್ಯಾಪಿಸಿದೆ ಮುಂಗಾರು, ಹಲವೆಡೆ ರೆಡ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೂನ್ ತಿಂಗಳ ಆರಂಭದಲ್ಲಿ ಯಥೇಚ್ಚವಾಗಿ ಸುರಿದು ನಂತರ ಸಣ್ಣ ವಿರಾಮವನ್ನು ಪಡೆದಿದ್ದ ನೈರುತ್ಯ ಮಾರುತಗಳು (Monsoon 2021) ಈಗ ಮತ್ತೆ ಮಳೆಯನ್ನು ಹೊತ್ತು ತಂದಿವೆ. ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಹೆಸರಾದ ಆಗುಂಬೆ, ಹುಲಿಕಲ್ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗಾಳಿ, ಮಳೆಯ ಅಬ್ಬರ ಜೋರಾಗಿಯೇ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲೂ ಧಾರಾಕಾರ ಮಳೆ (Heavy Rain) ಸುರಿಯುತ್ತಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ವರದಿಗಳು (Weather Report) ಮುನ್ಸೂಚನೆ ನೀಡಿವೆ.
ಹವಾಮಾನ ಇಲಾಖೆ ತಿಳಿಸಿರುವಂತೆ ಇಂದು (ಜುಲೈ 14) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. pic.twitter.com/Sp0hvAXpsP
— KSNDMC (@KarnatakaSNDMC) July 13, 2021
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಇಂದು ಬೆಳಗ್ಗೆ 8.30ರ ತನಕವೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಎಲ್ಲಾ ಜಿಲ್ಲೆಗಳಲ್ಲಿ 115.6 ಮಿಲಿ ಮೀಟರ್ಗೂ ಅಧಿಕ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ.
ಅಂತೆಯೇ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು ಮೇಲ್ಕಾಣಿಸಿದ ಪ್ರದೇಶಗಳಲ್ಲಿ 64.5 ಮಿಲಿ ಮೀಟರ್ಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 16ರ ತನಕವೂ ರಾಜ್ಯಾದ್ಯಂತ ಮಳೆ ವಾತಾವರಣ ಮುಂದುವರೆಯಲಿದೆ ಎಂದು ಹೇಳಲಾಗಿದೆ.
Source IMD: (1/2) Orange alert: Dakshina Kannada, Udupi, Uttara Kannada, Chikkamagaluru, Hassan, Kodagu, Shimoga, Belagavi, Dharwad, Haveri & Kalaburagi districts have been given Orange alert by IMD as on 13.07.2021 at 1300hrs valid till 8:30 AM of 14.07.2021.
— KSNDMC (@KarnatakaSNDMC) July 13, 2021
(2/2)-Yellow alert: Bagalkote Bidar Gadag Koppala Raichur & Yadgir dists have given Yellow alert by IMD as of 13.07.21 @ 1300hrs to 8:30 AM of 14.07.21. Orange alert defines as isolated very heavy rains (>115.6mm) likely. Yellow alert as, isolated heavy rains (>64.5mm) likely.
— KSNDMC (@KarnatakaSNDMC) July 13, 2021
ದೇಶದಲ್ಲಿ ಮೊದಲ ಬಾರಿಗೆ ನೈರುತ್ಯ ಮುಂಗಾರು ಎಲ್ಲೆಡೆ ವ್ಯಾಪಿಸಿದ್ದು, ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಜುಲೈ 16ರವರೆಗೂ ಮಳೆ ಇದೇ ರೀತಿ ಮುಂದುವರೆಯಲಿದ್ದು, ಒಟ್ಟಾರೆಯಾಗಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮಳೆಯಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಈಗಾಗಗಲೇ ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ.