Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Update: ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಬೆಂಗಳೂರಿನ ಮಾರ್ಚ್ ತಿಂಗಳ ವಾಡಿಕೆ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಇದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಮುಂದಿನ 24 ಗಂಟೆ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ​ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Karnataka Weather Update: ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಉಷ್ಣಾಂಶ ಹೆಚ್ಚಳ ಸಾಧ್ಯತೆ
ತಾಪಮಾನ
Follow us
ವಿವೇಕ ಬಿರಾದಾರ
|

Updated on: Mar 30, 2024 | 7:38 AM

ಬೆಂಗಳೂರು, ಮಾರ್ಚ್​ 30: ರಾಜ್ಯಾದ್ಯಂತ ಮುಂದಿನ 24 ಒಣಹವೆ ಬೀಸಲಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನವು (Temperature) 2 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ (North Karnataka) ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆ ಬೆಂಗಳೂರು (Bengaluru) ನಗರದಲ್ಲಿ ಗರಿಷ್ಠ ಉಷ್ಣಾಂಶ 36 ​ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ವಾಡಿಕೆಗಿಂತ 3.3 ಡಿಗ್ರಿ ಹೆಚ್ಚಳ:

ಬೆಂಗಳೂರಿನ ಮಾರ್ಚ್ ತಿಂಗಳ ವಾಡಿಕೆ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಇದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಏಪ್ರಿಲ್‌ನಲ್ಲಿ ವಾಡಿಕೆ ಗರಿಷ್ಠ ಉಷ್ಣಾಂಶದಲ್ಲಿ ಮತ್ತೊಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.

ಇದನ್ನೂ ಓದಿ: ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ

7 ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ:

ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಆಕಾಶ ಶುಭ್ರವಾಗಿರಲಿದ್ದು, ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ 40 ಡಿಗ್ರಿ, ಸೆಲ್ಸಿಯಸ್‌ ಗಡಿ ತಲುಪಿದೆ. ಹೀಗಾಗಿ, ಈ ಜಿಲ್ಲೆಗಳಿಗೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ