ಬೆಂಗಳೂರು, ಮಾರ್ಚ್ 30: ರಾಜ್ಯಾದ್ಯಂತ ಮುಂದಿನ 24 ಒಣಹವೆ ಬೀಸಲಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನವು (Temperature) 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ (North Karnataka) ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆ ಬೆಂಗಳೂರು (Bengaluru) ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಬೆಂಗಳೂರಿನ ಮಾರ್ಚ್ ತಿಂಗಳ ವಾಡಿಕೆ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಇದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಏಪ್ರಿಲ್‌ನಲ್ಲಿ ವಾಡಿಕೆ ಗರಿಷ್ಠ ಉಷ್ಣಾಂಶದಲ್ಲಿ ಮತ್ತೊಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.
ಇದನ್ನೂ ಓದಿ: ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್ಗೆ ಭಾರಿ ಡಿಮ್ಯಾಂಡ್, ಬೀದರ್ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ
ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಆಕಾಶ ಶುಭ್ರವಾಗಿರಲಿದ್ದು, ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ 40 ಡಿಗ್ರಿ, ಸೆಲ್ಸಿಯಸ್ ಗಡಿ ತಲುಪಿದೆ. ಹೀಗಾಗಿ, ಈ ಜಿಲ್ಲೆಗಳಿಗೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ