AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Update: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆದರೂ, ತಾಪಮಾನ ಹೆಚ್ಚಳ ಮುಂದುವರಿಯಲಿದೆ.

ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 10, 2025 | 8:24 AM

Share

ಬೆಂಗಳೂರು, ಮಾರ್ಚ್​ 10: ಬೆಂಗಳೂರು (Bengaluru), ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ (ಬೇಸಗೆ ಮಳೆ) (Pre Monsoon Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲೇ ಐಎಂಡಿ ಈ ಮುನ್ಸೂಚನೆ ನೀಡಿದೆ. ಮಾರ್ಚ್ 7 ರಂದು ಬೆಂಗಳೂರು ನಗರದಲ್ಲಿ ಈ ವರ್ಷದ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅತಿಯಾದ ತಾಪಮಾನದ ಕಾರಣ ಮುಂಗಾರಪೂರ್ವ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಮಳೆಯಾದರೂ ನಿಲ್ಲದು ತಾಪಮಾನ ಏರಿಕೆ!

ಸ್ವಲ್ಪ ಮಟ್ಟಿನ ಮಳೆಯಾದರೂ ತಾಪಮಾನ ಏರಿಕೆಯಿಂದ ಮುಕ್ತಿ ದೊರೆಯದೇ ಇರಬಹುದು. ಮಾರ್ಚ್ 11 ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಶಿಯಸ್ ಆಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ
Image
ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ
Image
ಕರ್ನಾಟಕದಾದ್ಯಂತ ಒಣಹವೆ, ಕರಾವಳಿಯಲ್ಲಿ ಉಷ್ಣ ಅಲೆ
Image
Karnataka Weather: ಮುಂದಿನ ಒಂದು ವಾರ ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ
Image
ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕರ್ನಾಟಕದಾದ್ಯಂತ ಒಣಹವೆ

ಕರಾವಳಿ ಜಿಲ್ಲೆಗಳಲ್ಲಿ ಹೇಗಿರಲಿದೆ ಪರಿಸ್ಥಿತಿ?

ಐಎಂಡಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಮತ್ತು ಆರ್ದ್ರತೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಆರೋಗ್ಯ ಸಮಸ್ಯೆ ಇರುವವರು, ಶಿಶುಗಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಬಿಸಿಲಿಗೆ ಹೋಗುವುದನ್ನು ತಪ್ಪಿಸುವಂತೆ ಐಎಂಡಿ ಎಚ್ಚರಿಕೆ ನೀಡಿದೆ.

ಐಎಂಡಿ ನೀಡಿರುವ ಸಲಹೆಗಳೇನು?

  • ಬಿಸಿಲಿನ ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು.
  • ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು.
  • ತಲೆಯನ್ನು ಬಟ್ಟೆ, ಟೋಪಿ ಅಥವಾ ಛತ್ರಿಯಿಂದ ಮುಚ್ಚಿಕೊಳ್ಳಬೇಕು.
  • ಪೌರಕಾರ್ಮಿಕರಿಗೆ ಅರ್ಧ ದಿನದ ಕೆಲಸಕ್ಕೆ ಆಗ್ರಹ

ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೌರಕಾರ್ಮಿಕರಿಗೆ ವಾರದ ರಜೆಯೊಂದಿಗೆ ಅರ್ಧ ದಿನದ ಕೆಲಸವನ್ನು ಘೋಷಿಸುವಂತೆ ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಗಳ ಮಂಡಳಿ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದು ವಿನಂತಿ ಮಾಡಲಾಗಿದೆ.

ಇದನ್ನೂ ಓದಿ: ಮುಂದಿನ ವಾರ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಪೌರಕಾರ್ಮಿಕರಿಗೆ ಕುಡಿಯುವ ನೀರು, ಓಆರ್‌ಎಸ್ ಮತ್ತು ಮಜ್ಜಿಗೆ ಒದಗಿಸಬೇಕು. ಶಾಖದ ಪ್ರಭಾವದಿಂದ ಕಾರ್ಮಿಕರನ್ನು ರಕ್ಷಿಸಲು ಐ ಶೇಡ್ಸ್, ಟೋಪಿಗಳು ಮತ್ತು ಛತ್ರಿಗಳನ್ನು ಸಹ ಒದಗಿಸಬೇಕು ಎಂದು ಕಾರ್ಮಿಕ ಸಂಘಗಳ ಮಂಡಳಿ ಮನವಿ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ