ನಾಳೆಯ ಹವಾಮಾನ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಲ್ಲಿ ಬೆಳಿಗ್ಗೆ ಚಳಿ ವಾತಾವರಣ
Karnataka Weather Tomorrow: ನಾಳೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಚಳಿ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು, ಡಿಸೆಂಬರ್ 03: ರಾಜ್ಯದಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ. ರಾಜಧಾನಿ ಬೆಂಗಳೂರಲ್ಲೂ ಸಣ್ಣ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ Next 5 days #Rainfall #Forecast maps for the #Karnataka state with district-wise warnings. Source: IMD Bengaluru@KarnatakaVarthe #KarnatakaRains pic.twitter.com/i1NdUvJv6L
— Karnataka State Natural Disaster Monitoring Centre (@KarnatakaSNDMC) December 3, 2025
ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ವರುಣ ಅಬ್ಬರ ನಿರೀಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ
ಎಲ್ಲೆಲ್ಲಿ ಒಣ ಹವೆ?
ಬೀದರ್, ಕಲಬುರಗಿ, ವಿಜಯಪುರ, ಯಾಗದಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಬೆಂಗಳೂರು ನಗರದಲ್ಲೂ ಮಳೆ
ಬೆಂಗಳೂರು ನಗರದಲ್ಲೂ ನಾಳೆ ಸಾಧಾರಣ ಮಳೆ ಅಥವಾ ಮೋಡಕವಿದ ವಾತಾವರಣ ಕಂಡುಬರಲಿದೆ. ಬೆಳಗ್ಗಿನ ಜಾವದ ಮೇಳೆ ಮಂಜು ಮುಸುಕಿದ ವಾತಾವರಣ ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗವನ್ನು ಗಂಟೆಗೆ 10 ಕಿ.ಮೀ. ಎಂದು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




