ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ಬೆಂಗಳೂರು ವಾತಾವರಣ?
Karnataka Weather Tomorrow: ನಾಳೆ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ನಿರೀಕ್ಷಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಇಲ್ಲಿದೆ.

ಬೆಂಗಳೂರು, ಡಿಸೆಂಬರ್ 04: ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?
ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ವಾಯುಭಾರ ಕುಸಿತ, ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ ಸಾಧ್ಯತೆ
ಎಲ್ಲೆಲ್ಲಿ ಒಣ ಹವೆ?
ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಭಾಗದ ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿಯೂ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರಲ್ಲಿಯೂ ಮಳೆ ಸಾಧ್ಯತೆ
ಬೆಂಗಳೂರಲ್ಲಿ ನಾಳೆ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರಲಿದೆ. ಗರದ ಕೆಲವೆಡೆ ಬೆಳಗ್ಗಿನ ಜಾವ ಮಂಜು ಮುಸುಕಿದ ವಾತಾವರಣ ಕಾಣಸಿಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




