AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ಸುಡುಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ
ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Mar 15, 2026 | 6:08 PM

Share

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ ಸುರಿದ ಮಳೆಕಾಫಿ ಬೆಳೆಗಾರರಲ್ಲಿ ಹರ್ಷ ತಂದಿದೆ.

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಮಳೆ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಕೂಡ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಮತ್ತು ಕಡಬಗೆರೆ ಭಾಗದಲ್ಲಿ ಭಾರೀ ಮಳೆಯಾಗಿದ್ದರೆ, ಮೂಡಿಗೆರೆ ಮತ್ತು NR ಪುರ ತಾಲೂಕಿನ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಕಣತಿ ಗ್ರಾಮದ ಬಳಿ ಮಳೆಗೆ ಮರ ಧರೆಗುರುಳಿದ ಹಿನ್ನೆಲೆ ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಭಾರಿ ಟ್ರಾಫಿಕ್​​ ಜಾಮ್​​ ಉಂಟಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ; ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!

ಹೇಗಿರಲಿದೆ ನಾಳೆ ರಾಜ್ಯದ ಹವಾಮಾನ?

ರಾಜ್ಯದ 4-5 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಳೆಯೂ ಗಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಅಂದಾಜಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣತೆ ಕಂಡುಬರಲಿದೆ. ಬೆಂಗಳೂರಿನ ತಾಪಮಾನ ಗರಿಷ್ಠ 33-34 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​​ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 8-15 ಕಿಲೋ ಮೀಟರ್​​ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:08 pm, Sun, 15 March 26

Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು