ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ: ಹವಾಮಾನ ಇಲಾಖೆ ಭವಿಷ್ಯ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ: ಹವಾಮಾನ ಇಲಾಖೆ ಭವಿಷ್ಯ
ಮಳೆ

Updated on: Apr 11, 2025 | 6:25 PM

ಬೆಂಗಳೂರು, ಏಪ್ರಿಲ್​ 11: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಬೇಸಿಗೆಯಲ್ಲಿ ಬಿಸಿಲಿನಿಂದ ಹೈರಾಣಾಗಿರುವ ಜನರಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು ಮತ್ತು ಕೊಪ್ಪಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ
ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಏಪ್ರಿಲ್ 13ರ ಬಳಿಕ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರ ಮಳೆ

ಮುಂದಿನ 3 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ

ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತೆ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ದುಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ಹುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಟ್ವಿಟರ್ ಪೋಸ್ಟ್​

ಇದನ್ನೂ ಓದಿ: ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ

ಇನ್ನು, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶುಕ್ರವಾರ ಆಲಿಕಲ್ಲು ಸಹಿತ ಮಳೆಯಾಗಲಿದೆ. ಮಳೆಯ ಆಗಮನದಿಂದ ಬಯಲುಸೀಮೆ ಜನರಲ್ಲಿ ಸಂತಸ ಮೂಡಿದೆ. ಕೋಲಾರ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ