Karnataka Weather Updates: ಕರ್ನಾಟಕದಲ್ಲಿ ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನ 2-3ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆ ಸಾಧ್ಯತೆ
ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಫೆಬ್ರವರಿ 25 ರವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 31-32 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗುರುವಾರ, ಚಾಮರಾಜನಗರದಲ್ಲಿ ರಾಜ್ಯದ ಬಯಲು ಸೀಮೆಯ ಕನಿಷ್ಠ ತಾಪಮಾನ 12.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. , ಚಿಕ್ಕಮಗಳೂರಿನಲ್ಲಿ ಗುರುವಾರ 13 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕಲಬುರ್ಗಿಯಲ್ಲಿ ಗುರುವಾರ ಗರಿಷ್ಠ 37.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಫೆ.27ರವರೆಗೆ ಅಧಿಕ ತಾಪಮಾನ, ಹವಾಮಾನ ಮುನ್ಸೂಚನೆ ಸಂಸ್ಥೆ ಶುಕ್ರವಾರ ಸುಮಾರು 32 ಮತ್ತು 16 ಡಿಗ್ರಿ ಸೆಲ್ಸಿಯಸ್‌ಗೆ ಸಾಕ್ಷಿಯಾಗಲಿದೆ. ಬೆಂಗಳೂರಿನ ಗರಿಷ್ಠ ತಾಪಮಾನ ಗುರುವಾರ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸ್ವಲ್ಪ ಮಂಜು ಕವಿದಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ