ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ, ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

Karnataka Weather Today: ಕರ್ನಾಟಕದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 13 ಮತ್ತು 14 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಕರಾವಳಿಯಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ, ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
ಸಾಂದರ್ಭಿಕ ಚಿತ್ರ
Image Credit source: TV9 Network

Updated on: Apr 13, 2026 | 6:50 AM

ಬೆಂಗಳೂರು, ಏಪ್ರಿಲ್ 13: ಕರ್ನಾಟಕದಾದ್ಯಂತ (Bangalore Weather) ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರನ್ನು ಕಂಗಾಲಾಗಿಸಿದೆ. ಈ ಮಧ್ಯೆ ತುಸು ತಂಪೆರೆಯುವಂಥ ಸುದ್ದಿಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆ ಪ್ರಕಾರ, ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ (ಏಪ್ರಿಲ್ 13 ಮತ್ತು 14) ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಐಎಂಡಿ ವರದಿಯ ಪ್ರಕಾರ, ಏಪ್ರಿಲ್ 13 ಮತ್ತು 14 ರಂದು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಇದಲ್ಲದೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನಲ್ಲಿ ಎಷ್ಟಿರಲಿದೆ ತಾಪಮಾನ? ಮಳೆ ಬರುತ್ತಾ?

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಏಪ್ರಿಲ್ 13ರ ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ 30% ಸಾಧ್ಯತೆಯಿದೆ ಎಂದು ಗೂಗಲ್ ವೆದರ್ ಮುನ್ಸೂಚನೆ ನೀಡಿದೆ.

ಇನ್ನಷ್ಟು ಏರಿಕೆಯಾಗಲಿದೆ ತಾಪಮಾನ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉಷ್ಣಾಂಶ ಹೆಚ್ಚಳವಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ. ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದ್ದು, ಶಾಖದ ಅಲೆ (Heatwave) ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಜನರು ಸನ್ ಸ್ಟ್ರೋಕ್‌ನಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರದಂತೆ ಮತ್ತು ಆಗಾಗ್ಗೆ ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿರುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ

ಏತನ್ಮಧ್ಯೆ, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ, ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 am, Mon, 13 April 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us