ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ

ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ತೀವ್ರ ಸೆಕೆ ಶುರುವಾಗಿದೆ. ಇಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಉಷ್ಣಾಂಶ ಹೆಚ್ಚಳವಾಗಿದೆ. ಬೆಂಗಳೂರು ನಗರದಲ್ಲಿಯೂ ತಾಪಮಾನದಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮಗಳು ಅಗತ್ಯ.

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ  ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ
ಕರ್ನಾಟಕ ಹವಾಮಾನ
Image Credit source: Ville de Hudson

Updated on: Feb 15, 2026 | 7:57 AM

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದಿದ್ದರೂ ಉಷ್ಣಾಂಶದಲ್ಲಿ ಏರಿಕೆ ಇದೆ.

ದಾವಣಗೆರೆಯಲ್ಲಿ 12. ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶುಭ್ರ ಆಕಾಶ ಇರಲಿದ್ದು, ಕೆಲವೆಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಹಾಸನದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us