Karnataka Weather: ರಾಜ್ಯದ ಹಲವೆಡೆ ಹೆಚ್ಚಿದ ಚಳಿ, ಮಳೆ ಮುನ್ಸೂಚನೆಯಿಲ್ಲ

|

Updated on: Dec 21, 2023 | 7:12 AM

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಕುಸಿದಿದೆ. ಒಂದೇ ದಿನದಲ್ಲಿ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಡಿಮೆಯಾಗಿದೆ. ವಿಜಯಪುರದಲ್ಲಿ ಕಳೆದ ವಾರ ಕನಿಷ್ಠ ಉಷ್ಣಾಂಶ 6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಆನಂತರ ಏರಿಕೆ ಕಂಡು ಈಗ ಮತ್ತೆ ಕುಸಿದಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಗರ ಕೇಂದ್ರದ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 23.6 ° C ಗರಿಷ್ಠ ತಾಪಮಾನ ದಾಖಲಾಗಿದೆ.

Karnataka Weather: ರಾಜ್ಯದ ಹಲವೆಡೆ ಹೆಚ್ಚಿದ ಚಳಿ, ಮಳೆ ಮುನ್ಸೂಚನೆಯಿಲ್ಲ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಡಿ.21: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಹೆಚ್ಚಿದೆ. ಜನರಿಗೆ ಧನುರ್‌ ಮಾಸದ ಚಳಿಯ ಅನುಭವ ಶುರುವಾಗಿದೆ (Cold Weather). ಮತ್ತೊಂದೆಡೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಡಿ.21 ರಿಂದ 26ರ ವರೆಗೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ(Karnataka Weather).

ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಇನ್ನು ಮಳೆಯ ಮುನ್ಸೂಚನೆ ಇಲ್ಲ ಆದರೂ ರಾಜ್ಯದ ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಆಗಲಿದ್ದು ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಗರ ಕೇಂದ್ರದ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 23.6 ° C ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: Gold Silver Price on 21 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಕುಸಿದಿದೆ. ಒಂದೇ ದಿನದಲ್ಲಿ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಡಿಮೆಯಾಗಿದೆ. ವಿಜಯಪುರದಲ್ಲಿ ಕಳೆದ ವಾರ ಕನಿಷ್ಠ ಉಷ್ಣಾಂಶ 6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಆನಂತರ ಏರಿಕೆ ಕಂಡು ಈಗ ಮತ್ತೆ ಕುಸಿದಿದೆ.

ಬೀದರ್‌ನಲ್ಲಿ ಬುಧವಾರ 12.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾವೇರಿಯಲ್ಲಿ 16.2 ಡಿಗ್ರಿ ಹಾಗೂ ರಾಯಚೂರಿನಲ್ಲಿ 16.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ನಗರ ಹಾಗೂ ಬೆಳಗಾವಿ ವಿಮಾನ ನಿಲ್ದಣಾ ಪ್ರದೇಶ, ಬಾಗಲಕೋಟೆ, ಧಾರವಾಡದಲ್ಲೂ ಚಳಿಯ ಅನುಭವ ಹೆಚ್ಚಾಗಿದೆ. ಧಾರವಾಡದಲ್ಲಿ 15 ಡಿಗ್ರಿ, ಬಾಗಲಕೋಟೆಯಲ್ಲಿ 15.1 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.8 ಡಿಗ್ರಿ, ಬೆಳಗಾವಿ ನಗರದಲ್ಲಿ 17 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ಕಂಡುಬಂದಿದೆ. ಕೊಪ್ಪಳದಲ್ಲಿ 16.2 ಡಿಗ್ರಿ, ಗದಗದಲ್ಲಿ 16 ಡಿಗ್ರಿ, ಕಲಬುರಗಿಯಲ್ಲಿ 17.4 ಡಿಗ್ರಿ ಸೆಲ್ಸಿಯಸ್‌ ಕಂಡು ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Thu, 21 December 23