Karnataka Weather: ರಾಜ್ಯದ ಹಲವೆಡೆ ಹೆಚ್ಚಾದ ಚಳಿ, ಬೀದರ್​ನಲ್ಲಿ ಅತಿ ಕಡಿಮೆ ಉಷ್ಣಾಂಶ

ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮುಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

Karnataka Weather: ರಾಜ್ಯದ ಹಲವೆಡೆ ಹೆಚ್ಚಾದ ಚಳಿ, ಬೀದರ್​ನಲ್ಲಿ ಅತಿ ಕಡಿಮೆ ಉಷ್ಣಾಂಶ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Dec 23, 2023 | 7:31 AM

ಬೆಂಗಳೂರು, ಡಿ.23: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಉಷ್ಣಾಂಶ ಇಳಿಕೆ ಕಂಡಿದೆ (Cold Weather). ಹೀಗಾಗಿ ರಾಜ್ಯದ ಅನೇಕ ಕಡೆಗಳಲ್ಲಿ ಮಂಜು ಕವಿದ ವಾತಾವರಣೆ ಚಳಿ ಹೆಚ್ಚಾಗಿದೆ. ಇನ್ನು ಮಧ್ಯಾಹ್ನದ ನಂತರ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 10.4 ಡಿ.ಸೆ. ಬೀದರ್​ನಲ್ಲಿ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 12.1 ಡಿಗ್ರಿ, ರಾಯಚೂರಿಯಲ್ಲಿ 13.8 ಡಿಗ್ರಿ. ಧಾರವಾಡದಲ್ಲಿ 15 ಡಿಗ್ರಿ, ಬಾಗಲಕೋಟೆಯಲ್ಲಿ 15.3 ಡಿಗ್ರಿ, ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ನಿನ್ನೆ ಇತ್ತು.

ಕೊಪ್ಪಳದಲ್ಲಿ 16.6 ಡಿಗ್ರಿ, ಹಾವೇರಿಯಲ್ಲಿ 16.8 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ನಗರದಲ್ಲಿ 18.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶವು ಕಂಡು ಬಂದಿತು. ದಕ್ಷಿಣ ಒಳನಾಡಿನ ಭಾಗದಲ್ಲೂ ಚಳಿಯ ವಾತಾವರಣವಿತ್ತು. ಚಿಕ್ಕಮಗಳೂರಿನಲ್ಲಿ 14.2 ಡಿಗ್ರಿ, ಚಿಂತಾಮಣಿಯಲ್ಲಿ 16.4 ಡಿಗ್ರಿ, ದಾವಣಗೆರೆಯಲ್ಲಿ 16.5 ಡಿಗ್ರಿ ಸೆಲ್ಸಿಯಸ್‌, ಹಾಸನ ಹಾಗೂ ಮೈಸೂರಿನಲ್ಲಿ 17 ಡಿಗ್ರಿ, ಮಂಡ್ಯದಲ್ಲಿ 17.1 ಡಿಗ್ರಿ, ಚಾಮರಾಜನಗರದಲ್ಲಿ 17.3 ಡಿಗ್ರಿ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 17.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶ ಕಂಡು ಬಂದಿತು.

ಇದನ್ನೂ ಓದಿ: Petrol Diesel Price on December 23: ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ, ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?

ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮುಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ ಐದು ದಿನ ಮಳೆ ಇಲ್ಲ

ಕರ್ನಾಟದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 23, 24, 26, 27ರಂದು ಒಣಹವೆಯ ವಾತಾವರಣ ಇರಲಿದೆ. ಡಿ.25 ರ ಸೋಮವಾರ ಸಂಜೆ ಇಲ್ಲವೇ ರಾತ್ರಿಯಂದು ಕರ್ನಾಟಕದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗಲು ವೇಳೆ ಒಣಹವೆಯ ವಾತಾವರಣ ಇರಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Sat, 23 December 23

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್