ಶಿವರಾತ್ರಿವರೆಗೂ ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ಒಂದು ದಿನದಿಂದ ಚಳಿ ತುಸಿ ಹೆಚ್ಚಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ.
ಮುಂದಿನ 48 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಮತ್ತು ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ಉಷ್ಣಾಂಶ 9.2 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಮತ್ತಷ್ಟು ಓದಿ:Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ
ಬೆಂಗಳೂರಿನ ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ