Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಭಾಗಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 5.1ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಾಗಲಿದೆ.

Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ
ಕರಾವಳಿಯಲ್ಲಿ ಉಷ್ಣಗಾಳಿ

Updated on: Mar 10, 2023 | 7:52 AM

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಭಾಗಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 5.1ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಾಗಲಿದೆ. ಪಣಂಬೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.4 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದಿನಿಂದ ಮಾರ್ಚ್ 9-12ರವರೆಗೆ ದೇಶದ ವಿವಿಧೆಡೆ ಗುಡುಗು ಸಹಿತ ಮಳೆ ಬೀಳಲಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲಿ ಲಘು ಮಳೆ ಇಲ್ಲವೇ ಗುಡುಗು ಸಹಿತ ಹಗುರ ಮಳೆಯಾಗುವ ಲಕ್ಷಣಗಳು ಇವೆ. ಈ ವೇಳೆ ಎಲ್ಲೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ.

ಮತ್ತಷ್ಟು ಓದಿ: India Weather Updates: ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ದೆಹಲಿಯಲ್ಲಿ ಶುಕ್ರವಾರ ಮಾರ್ಚ್ 10ರಂದು ಕೂಡ ಕೆಲವು ಕಡೆಗಳಲ್ಲಿ ಹಗುರು ಮಳೆಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲದೇ ಹಿಮಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರ್ಯಾಣ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಕೆಲವು ರಾಜ್ಯಗಳ ಒಂದೆರಡು ಕಡೆಗಳಲ್ಲಿ ಶುಕ್ರವಾರದವರೆಗೆ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ