Karnataka Weather: ರಾಜ್ಯದಲ್ಲಿ ಎರಡು ದಿನ ಮಳೆ, ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ 45-55ಕಿ.ಮೀ ವೇಗದಲ್ಲಿ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರು, ಅ.01: ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ 45-55ಕಿ.ಮೀ ವೇಗದಲ್ಲಿ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್ ಜಾಮ್
ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಒಂದೆರಡು ಕಡೆಗಳಲ್ಲಿ ಹಗುರ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ