Karnataka Weather Updates: ಡಿಸೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡಿಸೆಂಬರ್ 16ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 12ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡಿಸೆಂಬರ್ 16ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 12ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕೋಲಾರ, ಚಿಂತಾಮಣಿ, ರಾಯಲ್ಪಾಡು, ಬೆಂಗಳೂರು, ಮಾಲೂರು, ಗೌರಿಬಿದನೂರು, ದೇವನಹಳ್ಳಿ, ಬೆಂಗಳೂರು ನಗರ, ಯಲಹಂಕ, ಹೆಸರಘಟ್ಟ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಎಲೆಕ್ಟ್ರಾನಿಕ್ಸಿಟಿ, ಸಿರಾ, ತಿಪಟೂರು, ಕುಡತಿನಿ, ಹಿರಿಯೂರು, ಗುಬ್ಬಿ, ಬುಕ್ಕಪಟ್ಟಣ, ಮಾನ್ವಿ, ಶ್ರೀರಂಗಪಟ್ಟಣ, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಶಿವಮೊಗ್ಗ, ಕುಣಿಗಲ್ನಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಎಚ್ಎಎಲ್ನಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 18.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮ್ಯಾಂಡಸ್ ಚಂಡಮಾರುತವು ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಾಕಷ್ಟು ಮಳೆಯನ್ನು ಸುರಿಸುತ್ತಿದೆ. ದಟ್ಟನೆಯ ಮಂಜು, ಜೋರಾಗಿ ತಣ್ಣನೆಯ ಗಾಳಿ ಬೀಸುತ್ತಿದೆ. ಜಿಟಿ ಜಿಟಿ ಮಳೆಯಿಂದ ಮನೆಯಿಂದ ಹೊರಬರಲಾರದೇ ಜನರು ಪರದಾಡುತ್ತಿದ್ದಾರೆ.
ಶಿವಮೊಗ್ಗದಲ್ಲಿ ಕೂಡ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಇನ್ನು ಗದಗ ಬೆಟಗೇರಿಯಲ್ಲೂ ತುಂತುರು ಮಳೆಯಾಗುತ್ತಿದೆ. ಮಳೆ ಹೆಚ್ಚಾದರೆ ಕಡಲೆ ಬೆಳೆ ಹಾಳಾಗುವ ಆತಂಕ ಎದುರಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ