AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Updates: ಕರ್ನಾಟಕದಲ್ಲಿ ಮತ್ತೆ ಹೆಚ್ಚಲಿದೆ ವರುಣನ ಆರ್ಭಟ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್ 8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ(Weather) ಇಲಾಖೆ ನೀಡಿದೆ

Karnataka Weather Updates: ಕರ್ನಾಟಕದಲ್ಲಿ ಮತ್ತೆ ಹೆಚ್ಚಲಿದೆ ವರುಣನ ಆರ್ಭಟ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Dec 06, 2022 | 6:00 AM

Share

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್ 8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ(Weather) ಇಲಾಖೆ ನೀಡಿದೆ. ಡಿಸೆಂಬರ್ 6 ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.

ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಸೋಮವಾರ ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯು ಭಾರ ಕುಡಿತ ನಿರ್ಮಾಣವಾಗಿದೆ, ಇದು ತಮಿಳುನಾಡು ಹಾಗೂ ಆಂಧ್ರಪ್ರದೇಶ ಮಾರ್ಗವಾಗಿ ಚಲಿಸುತ್ತದೆ. ಇದರ ಪರಿಣಾಮವಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ.

ಡಿಸೆಂಬರ್ 7 ಹಾಗೂ 8 ರಂದು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ಡಿಸೆಮಬರ್ 8 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಡಿಸೆಂಬರ್ 10 ರಂದು ಕೂಡ ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್​ನಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ