AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದಲ್ಲಿ ಇಂದು-ನಾಳೆ ವಿಪರೀತ ಮಳೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಆರೆಂಜ್​ ಅಲರ್ಟ್​​

Karnataka Rain: ಗುರುವಾರ ಮತ್ತು ಶುಕ್ರವಾರ (ಇಂದು-ನಾಳೆ) ಕರಾವಳಿ ಹಾಗೂ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ. ಹಾಗೇ, ಉತ್ತರ ಕರ್ನಾಟಕದ ಭಾಗಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿದೆ.

Karnataka Weather: ರಾಜ್ಯದಲ್ಲಿ ಇಂದು-ನಾಳೆ ವಿಪರೀತ ಮಳೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಆರೆಂಜ್​ ಅಲರ್ಟ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 22, 2021 | 10:38 AM

Share

ಜು.23ರೊಳಗೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಗಾರು ಮಳೆ ಪ್ರಮಾಣ ಹೆಚ್ಚಾಗಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಮೇಲೆ ಮತ್ತಷ್ಟು ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಮಲೆನಾಡು, ಕರಾವಳಿಗಳಲ್ಲಿ ಕಳೆದ ಎರಡು ವಾರಗಳಿಂದಲೂ ಮಳೆ ಸುರಿಯುತ್ತಿದ್ದು(Karnataka Rain), ಎರಡು ದಿನಗಳಿಂದ ಗಾಳಿಯ ಮಟ್ಟವೂ ಹೆಚ್ಚಾಗಿದೆ. ಅದರಲ್ಲೂ ಜು.22 ಮತ್ತು 23 (ಗುರುವಾರ ಮತ್ತು ಶುಕ್ರವಾರ) ರಾಜ್ಯಾದ್ಯಂತ ಇನ್ನಷ್ಟು ಮಳೆ (Rainfall)ಯಾಗುವ ಸಾಧ್ಯತೆ ಇದೆ ಎಂದು ಐಎಂಡಿ (IMD) ಹೇಳಿದೆ. ಆದರೆ ಕರಾವಳಿ ತೀರ ಮತ್ತು ದಕ್ಷಿಣ ಭಾಗಗಳಲ್ಲಿ ಮುಂದಿನ 5ದಿನಗಳವರೆಗೂ ಮಳೆ ಮುಂದುವರಿಯಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಜು.24ರಿಂದ ಕಡಿಮೆಯಾಗಬಹುದು ಎಂದೂ ಅಂದಾಜಿಸಿದೆ.

ಗುರುವಾರ ಮತ್ತು ಶುಕ್ರವಾರ (ಇಂದು-ನಾಳೆ) ಕರಾವಳಿ ಹಾಗೂ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ. ಹಾಗೇ, ಉತ್ತರ ಕರ್ನಾಟಕದ ಭಾಗಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿದೆ. ಅಂದರೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸಾಲಿಗೆ ಸೇರುವ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಘಟ್ಟ ಪ್ರದೇಶಗಳಲ್ಲಿ ಈಗಾಗಲೇ ಆರೆಂಜ್​ ಅಲರ್ಟ್ ಘೋಷಣೆಯಾಗಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ (Bangalore Weather) ಬೆಂಗಳೂರಿನಲ್ಲಿ ಭಾನುವಾರ ಅಂದರೆ ಜುಲೈ 25ರವರೆಗೂ ಮೋಡಸಹಿತ ವಾತಾವರಣ ಮುಂದುವರಿಯಲ್ಲಿದ್ದು, ಸಣ್ಣಪ್ರಮಾಣದ ಮಳೆ ಬೀಳಬಹುದು. ವಾರಾಂತ್ಯದವರೆಗೂ ತಾಪಮಾನ 20ರಿಂದ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಆಗಾಗ ಬಲವಾದ ಗಾಳಿ ಕೂಡ ಬೀಸಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಕದಲ್ಲಿ ಮುಂಗಾರು ಮಳೆ ಇದುವರೆಗೆ ಸಾಮಾನ್ಯಕ್ಕಿಂತಲೂ ಹೆಚ್ಚಾಗಿಯೇ ಬಿದ್ದಿದೆ. ಜೂ.1ರಿಂದ ಇಲ್ಲಿಯವರೆಗೆ ಶೇ.15ರಷ್ಟು ಹೆಚ್ಚು ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಜೂ.1ರಿಂದ 21ರವರೆಗೆ 300 ಎಂಎಂ ಸುರಿದಿದ್ದು, ವರ್ಷದಲ್ಲಿ ಈ ಹೊತ್ತಿಗೆ ಎಷ್ಟು ಪ್ರಮಾಣದ ಮಳೆಯಾಗಬೇಕೋ, ಅದಕ್ಕಿಂತ ಸರಾಸರಿ ಶೇ.120ರಷ್ಟು ಹೆಚ್ಚು ಮಳೆಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ; ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆ

Karnataka Weather updates Heavy rains expected in the state today and Tomorrow

Published On - 10:37 am, Thu, 22 July 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ