AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯದಲ್ಲಿ ಮೇ 22ರವರೆಗು ಮಳೆ, 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಉಂಟಾದ ಭೀಕರ ಪರಿಸ್ಥಿತಿಯಿಂದ ಜನರು ಹೈರಾಣಾಗಿದ್ದರು. ಇದೀಗ ಕಳೆದ 15 ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕೊಳ್ಳ, ನದಿಗಳಿಗೆ ಜೀವ ಕಳೆ ಬಂದಿದೆ. ಇನ್ನು ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

Karnataka Rain: ರಾಜ್ಯದಲ್ಲಿ ಮೇ 22ರವರೆಗು ಮಳೆ, 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಮಳೆ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: May 20, 2024 | 7:22 AM

Share

ಬೆಂಗಳೂರು, ಮೇ 20: ರಾಜ್ಯದಲ್ಲಿ‌ ಮುಂಗಾರು ಪೂರ್ವ ಮಳೆ (Rain)‌ ಚುರುಕಾಗಿದ್ದು, ಇಂದು (ಮೇ 20) ಮುಂಗಾರ ಎಫೆಕ್ಟ್ ಜೋರಾಗಿಯೇ ಇರಲಿದೆ. ಮಳೆಯಿಂದ ನದಿಗಳಿಗೆ ಜೀವ ಕಳೆ ಬಂದಿದ್ದು, ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. ಇನ್ನು ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಸೋಮವಾರ ಎಲೆಲ್ಲಿ ಮಳೆಯಾಗಲಿದೆ, ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ ಮಾಡಲಾಗಿದೆ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಜೋರಾಗಿಯೇ ಆಗುತ್ತಿದೆ. ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಮೇಲ್ಮೈ ಸುಳಿಗಾಳಿ, ಟಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಇಂದಿನಿಂದ ಮೇ 22 ರವರೆಗೂ ಮಳೆಯ ಅಲರ್ಟ್‌ ನೀಡಲಾಗಿದೆ. ಹಾಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದಿನಿಂದ ಐದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರೀ ಮಳೆ, ಸಿಡಿಲಿಗೆ ಇಬ್ಬರು ಬಲಿ

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಕರಾವಳಿ ಭಾಗಕ್ಕೂ ಆರೆಂಜ್ ಅಲರ್ಟ್ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ದಕ್ಷಿಣ, ಉಡುಪಿ, ಮಂಗಳೂರು ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಅಂತ ಹವಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮಳೆ

ಬೆಂಗಳೂರಿನಲ್ಲಿ‌ ಮುಂದಿನ 48 ಗಂಟೆಗಳ ಮಳೆಯ ಅಲರ್ಟ್ ನೀಡಿದ್ದು, ಇಂದು ನಗರದೆಲ್ಲಡೆ ಮೋಡ‌ ಕವಿದ ವಾತಾವರಣವಿರಲಿದೆ. ಇಷ್ಟು ದಿನಗಳ ಕಾಲ ಬಿಸಿಲಿನಿಂದ ಬೆಂದಿದ್ದ ಬೆಂಗಳೂರು ಜನರು ಈಗ ಕೂಲ್ ಆಗಿದ್ದಾರೆ.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Follow Us
Poornima Agali Nagaraj
Poornima Agali Nagaraj
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ