Karnataka Weather: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ, ಮೈಸೂರಿನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಶಾಖದ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್, ಮಂಡ್ಯ, ಮೈಸೂರಿನಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಹೊನ್ನಾವರ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳದಲ್ಲೂ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.

ಬೆಂಗಳೂರು, ಮಾರ್ಚ್ 06: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ವಾತಾವರಣ ತಂಪಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಬಿಸಿಲ ಝಳವಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್, ಮಂಡ್ಯ, ಮೈಸೂರಿನಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಹೊನ್ನಾವರ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳದಲ್ಲೂ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.
ಹೊನ್ನಾವರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಮಲೆನಾಡಿನಲ್ಲಿ ದಟ್ಟ ಮಂಜು, ಕರಾವಳಿಯಲ್ಲಿ ಉಷ್ಣ ಅಲೆ
ಬೀದರ್ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬಾಗಲಕೋಟೆಯಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ