AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದಿನಿಂದ ಏಪ್ರಿಲ್​ 18ರವರೆಗೆ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಉತ್ತರ ಕರ್ನಾಟಕದ ಕೆಲವೆಡೆ ಗುರುವಾರ ಮಳೆಯಾಗಿದೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಇಂದಿನಿಂದ ಏಪ್ರಿಲ್​ 18ರವರೆಗೆ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Arewaworld Network
ನಯನಾ ರಾಜೀವ್
|

Updated on: Apr 12, 2024 | 7:36 AM

Share

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ ಮುಂದುವರೆದಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಸಂಕೇಶ್ವರ, ಹುಕ್ಕೇರಿ, ಯಡವಾಡದಲ್ಲಿ ಮಳೆಯಾಗಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರಲಿದೆ. ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಓದಿ: Karnataka Weather: ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.8ಡಿಗ್ರಿ ಸೆಲ್ಸಿಯಸ್​ ಗರಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ38.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ