Karnataka Weather Updates: ಡಿಸೆಂಬರ್ 19 ರಿಂದ 2 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 19ರಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather Updates: ಡಿಸೆಂಬರ್ 19 ರಿಂದ 2 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
Karnataka Rain
Follow us
TV9 Web
| Updated By: ನಯನಾ ರಾಜೀವ್

Updated on: Dec 16, 2022 | 6:00 AM

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 19ರಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು. ಅದರಿಂದ ನಿರಂತರವಾಗಿ ಮಳೆ, ಚಳಿ ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ 8 ಸೆಂ ಮೀ ಮಳೆಯಾಗಿದ್ದರೆ, ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಮತ್ತಷ್ಟು ಓದಿ:Karnataka Rain Updates: ನಾಳೆ(ಡಿ.15) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ

ನಗರದಲ್ಲಿಂದು ಗರಿಷ್ಠ ತಾಪಮಾಮ 25 ಡಿಗ್ರಿ, ಕನಿಷ್ಟ ತಾಪಾಮಾನ 19 ಡಿಗ್ರಿ ಇರಲಿದೆ ಎಂದು ಹೇಳಿದರು. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುನ್ಸೂಚನೆ ಪ್ರಕಾರ,  ಡಿಸೆಂಬರ್ 15ರಂದು ದಕ್ಷಿಣ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ.

ಈ ಕಾರಣಕ್ಕೆ ಗುರುವಾರ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ