ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 19ರಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು. ಅದರಿಂದ ನಿರಂತರವಾಗಿ ಮಳೆ, ಚಳಿ ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ 8 ಸೆಂ ಮೀ ಮಳೆಯಾಗಿದ್ದರೆ, ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಮತ್ತಷ್ಟು ಓದಿ:Karnataka Rain Updates: ನಾಳೆ(ಡಿ.15) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ
ನಗರದಲ್ಲಿಂದು ಗರಿಷ್ಠ ತಾಪಮಾಮ 25 ಡಿಗ್ರಿ, ಕನಿಷ್ಟ ತಾಪಾಮಾನ 19 ಡಿಗ್ರಿ ಇರಲಿದೆ ಎಂದು ಹೇಳಿದರು. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುನ್ಸೂಚನೆ ಪ್ರಕಾರ, ಡಿಸೆಂಬರ್ 15ರಂದು ದಕ್ಷಿಣ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ.
ಈ ಕಾರಣಕ್ಕೆ ಗುರುವಾರ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ