Karnataka Weather Updates: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೀದರ್, ನಿರ್ಣಾ, ಶಹಪುರ, ನಿಟ್ಟೂರು, ಜನವಾಡ, ಹುಮನಾಬಾದ್, ಕಮಲಾಪುರ, ಕೋಲಾರ, ಮಾಲೂರು, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ಕಲಬುರಗಿ, ಮುಧೋಳ, ತಾಳಿಕೋಟೆ, ಗೋಪಾಲನಗರ, ಹೊಸಕೋಟೆ, ಗೌರಿಬಿದನೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ
ಪಣಂಬೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು.
ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಸ ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು. ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಹಲವೆಡೆ ಶನಿವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಾರ್ಚ್ 21 ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರವೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ