AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು 2 ಡಿಗ್ರಿ ಸೆಲ್ಸಿಯಸ್ ​​ತಾಪಮಾನ ಹೆಚ್ಚಳ

Karnataka Temperature: ಈ ಬಾರಿ ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗಿಲ್ಲ. ಬೇಸಿಗೆ ಕಾಲ ಆರಂಭವಾಗುವ ಮುಂಚೆಯೇ ಬಿಸಿಲಿನ ತಾಪಮಾನಕ್ಕೆ ಜನರು ಬಳಲುತ್ತಿದ್ದಾರೆ. ಹಾಗಾದರೆ ರಾಜ್ಯಾದ್ಯಂತ ಇಂದು ಹವಾಮಾನ ಹೇಗಿರಲಿದೆ? ತಾಪಮಾನದಲ್ಲಿ ವೈಪರಿತ್ಯ ಇದೆಯೇ? ಈ ಕುರಿತು ಇಲ್ಲಿದೆ. ಹೌದು ರಾಜ್ಯದಲ್ಲಿ ತಾಪಮಾನ ವೈಪರಿತ್ಯ ಆಗಲಿದೆ. ಇಂದು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು 2 ಡಿಗ್ರಿ ಸೆಲ್ಸಿಯಸ್ ​​ತಾಪಮಾನ ಹೆಚ್ಚಳ
ತಾಪಮಾನ (ಸಾಂದರ್ಭಿಕ ಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 23, 2024 | 7:58 AM

Share

ರಾಜ್ಯಾದ್ಯಂತ ಮುಂದಿನ 24 ಗಂಟೆ ಒಣಹವೆ ಬೀಸಲಿದೆ. ಇನ್ನು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರವಾಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದ್ದು, ಒಂದೆರಡು ಜಿಲ್ಲೆಗಳಲ್ಲಿ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಲಿದೆ.

ಬಿಸಲು ನಾಡು ಎಂದು ಖ್ಯಾತಿ ಗಳಿಸಿರುವ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಇಂದು (ಫೆ.23) ಗರಿಷ್ಠ 44 ಮತ್ತು ಕನಿಷ್ಠ 26 ಡ್ರಿಗ್ರಿ ಸೆಲ್ಸಿಯಸ್​ ತಾಪಮಾನ ಇರಲಿದೆ. ಇನ್ನು ಗುಮ್ಮಟ ನಗರಿ ವಿಜಯಪುರದಲ್ಲಿ ಗರಿಷ್ಟ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ