Karnataka Rain: ಏಪ್ರಿಲ್​ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Update: ಸುಡು ಬಿಸಿಲಿಗೆ ಹಿಡಿಶಾಪ ಹಾಕುತ್ತಿರುವವರು ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

Karnataka Rain: ಏಪ್ರಿಲ್​ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
Follow us
Skanda
| Updated By: Digi Tech Desk

Updated on:Apr 06, 2021 | 10:14 AM

ಬೆಂಗಳೂರು: ಬಿಸಿಲಿನ ಝಳಕ್ಕೆ ಕಂಗಾಲಾಗಿರುವ ಜನತೆಗೆ ವರುಣ ದರ್ಶನ ಭಾಗ್ಯ ನೀಡುವ ಸಾಧ್ಯತೆ ಇದೆ. ಇಂದಿನಿಂದ ಏಪ್ರಿಲ್ 10ರ ತನಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನತೆ ಬೆವರಿ ಬಳಲಿದ್ದಾರೆ. ಸುಡು ಬಿಸಿಲಿಗೆ ಹಿಡಿಶಾಪ ಹಾಕುತ್ತಿರುವವರು ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಏಪ್ರಿಲ್ 6 ರಂದು ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಹಾಗೂ ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್​ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್​ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್​ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: ಅಚಾನಕ್ ಸುರಿದ ಗಾಳಿ, ಮಳೆಗೆ ಯಾದಗಿರಿ ನಗರಸಭೆಯ ಮೇಲ್ಚಾವಣಿ ಕುಸಿತ

ಬೆಂಗಳೂರು ಬಿಸಿಲು: ನಗರದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಉಷ್ಣಾಂಶ ದಾಖಲು

(Weather Updates various districts in Karnataka may get rainfall till April 10th)

Published On - 9:11 am, Tue, 6 April 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ