Karnataka Weather: ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಕಡೆ ಬಿಸಿಲ ಝಳ ಹೆಚ್ಚಿದೆ ಭೂಮಿಗೆ ತಂಪೆರೆಯಲು ವರುಣ ದೇವನ ಆಗಮನವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
Image Credit source: Britannica

Updated on: Apr 09, 2024 | 7:36 AM

ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದ ಕಡೆ ಏಪ್ರಿಲ್ 13ರಿಂದ ಮಳೆ ಶುರುವಾಗಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಏಪ್ರಿಲ್ 13ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ಮುಂದಿನ 4 ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 40.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 40.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us