AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮೈಸೂರು, ತುಮಕೂರು ಸೇರಿದಂತೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಸಾಕಷ್ಟು ಕಡೆಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿಯಲ್ಲಿ ನಾಳೆಯಿಂದ ಮಳೆ ಹೆಚ್ಚಾಗಲಿದ್ದು, ಮೈಸೂರು, ಕೋಲಾರ, ತುಮಕೂರು ಸೇರಿದಂತೆ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಜೋರು ಮಳೆ ಸುರಿಯುವ ನಿರೀಕ್ಷೆ ಇದೆ.

Karnataka Rains: ಮೈಸೂರು, ತುಮಕೂರು ಸೇರಿದಂತೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ
ಮಳೆImage Credit source: Mint
ನಯನಾ ರಾಜೀವ್
|

Updated on: Jun 07, 2024 | 7:38 AM

Share

ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿದೆ, ಕಳೆದ ಎರಡು ತಿಂಗಳಿನಿಂದ ಇದ್ದ ಬಿಸಿಲಿನ ಅಬ್ಬರ ಇಳಿದಿದೆ. ಬೆಂಗಳೂರಿನಲ್ಲಿ ಗುರುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಬೆಳಗ್ಗೆ ಕೂಡ ಜಿಟಿ ಜಿಟಿ ಮಳೆ ಇದೆ. ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಗಡಿ, ಮಂಠಾಳ, ರಾಯಲ್ಪಾಡು, ಮಧುಗಿರಿ, ಅಜ್ಜಂಪುರ, ಮಾಣಿ, ಮಂಕಿ, ಚನ್ನರಾಯಪಟ್ಟಣ, ಅಂಕೋಲಾ, ಶಾಹಪುರ, ಬಾಳೆಹೊನ್ನೂರು, ಶ್ರವಣಬೆಳಗೊಳ, ತುಮಕೂರು, ತೊಂಡೇಭಾವಿ, ಕಾರವಾರ, ಶಿವಮೊಗ್ಗ, ಬನವಾಸಿ, ಕೋಟ, ಕುಂದಾಪುರ, ಮುಲ್ಕಿ, ಖಜೂರಿ, ಅಥಣಿ, ಬಾದಾಮಿ, ಧಾರವಾಡ, ಮಹಾಲಿಂಗಪುರ, ಬೀದರ್, ಬಾದಾಮಿ, ಧಾರವಾಡ, ಬಿಳಗಿ, ಹಾವೇರಿ, ಕೂಡಲಸಂಗಮ, ಬೇಲೂರು, ದಾವಣಗೆರೆ, ಗುಬ್ಬಿ, ದೊಡ್ಡಬಳ್ಳಾಪುರ, ಹೆಸರಘಟ್ಟದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಶಿವಮೊಗ್ಗ, ಹಾಸನ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ಮಳೆ ಜೋರು

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ