Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ

ಕರ್ನಾಟಕದಲ್ಲಿ ಇಂದು ಚಳಿ ಹಾಗೂ ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು ಇಂದು ಶುಭ್ರ ಆಕಾಶ ಗೋಚರಿಸುತ್ತಿದೆ. ಇಂದಿನಿಂದ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಜಿನ ಪರಿಸ್ಥಿತಿ ಮುಂದುವರಿದಿದ್ದು, ಮಳೆಯ ವಾತಾವರಣ ಕಡಿಮೆಯಾಗಿದೆ. ಸಿದ್ದಾಪುರ, ಹೊಸಕೋಟೆಯಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ
ಚಳಿ
Image Credit source: PTI

Updated on: Dec 29, 2024 | 8:18 AM

ಕರ್ನಾಟಕದಾದ್ಯಂತ ಇಂದಿನಿಂದ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಒಣಹವೆ ಮುಂದುವರೆಯಲಿದೆ. ವಿಜಯನಗರ, ತುಮಕೂರು,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೆಯೇ ಉತ್ತರ ಒಳನಾಡಿನ ಹಾವೇರಿ, ಕಲಬುರಗಿ, ಕೊಪ್ಪಳ,. ರಾಯಚೂರು, ವಿಜಯನಗರ, ಯಾದಗಿರಿ, ಗದಗ, ಬಾಗಲಕೋಟೆಯಲ್ಲಿ ಚಳಿ ಹೆಚ್ಚಾಗಲಿದೆ.

ಸಿದ್ದಾಪುರ, ಹೊಸಕೋಟೆಯಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್​ಎಎಲ್​ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ

ಬೀದರ್​ನಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Sun, 29 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us